
ಪ್ರಿಯ ಓದುಗರೆ ನಿಮಗೊಂದು ಸಿಹಿ ಸುದ್ದಿ ಇದೆ, ಕರ್ನಾಟಕ ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ನೀಡಲು ಸರ್ಕಾರ ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ನೀಡಲಿದ್ದಾರೆ ಎಂದು ಕಂದಾಯ ಸಚಿವರಾದಂತಹ ಆರ್. ಅಶೋಕ ಘೋಷಿಸಿದರು.
ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ.ಅದು ಜುಲೈನಿಂದ ಅನ್ವಯ ಆಗಲಿದ್ದು . ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು.
ಕಿಸಾನ್ ಕ್ರೆಡಿಟ್ ಕಾರ್ಡ್
ಅತಿ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷದವರೆಗೂ ಸಾಲ ಪಡೆಯಿರಿ💸💸
ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಸಂಪೂರ್ಣ ಮಾಹಿತಿಗಾಗಿ ಕೆಳಗಿನ ಲಿಂಕ್ ಅನ್ನು ಒತ್ತಿ https://mahitisara.com/index.php/2023/01/04/how-to-apply-application-for-kisan-credit-card/
ಅಲೆಮಾರಿಗಳಿಗೆ ನೆಲೆ: ಕಳೆದ 75 ವರ್ಷಗಳಿಂದ ಯಾವ ಸರ್ಕಾರವೂ ಮಾಡದ ಕೆಲಸವನ್ನು ಬಿಜೆಪಿ ನೇತೃತ್ವದ ಸರ್ಕಾರ ಮಾಡಿ ತೋರಿಸಿದೆ , ಯಾವುದೇ ಆದಂತ ದಾಖಲೆಯೇ ಇಲ್ಲದ ತಾಂಡಾಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಅಲೆಮಾರಿಗಳಿಗೆ ನೆಲೆ ನೀಡುವ ಕೆಲಸ ಮಾಡಿದ್ದೇವೆ. ಆ ಮೂಲಕ ಒಂದು ಒಳ್ಳೆಯ ಕೆಲಸ ಮಾಡಿದ ಹೆಮ್ಮೆ ಇದೆ ಎಂದು ಸಚಿವ ಅಶೋಕ ಹೇಳಿದರು.
ಮಾಚನಾಳ ತಾಂಡಾಕ್ಕೆ ₹ 1 ಕೋಟಿ: ಹಕ್ಕುಪತ್ರ ವಿತರಣೆಯ ಬಳಿಕ ಮಾಚನಾಳ ತಾಂಡಾದ ಸಂಪೂರ್ಣ ಅಭಿವೃದ್ಧಿಗಾಗಿ , ಪರಿವರ್ತನೆಗಾಗಿ ₹ 1 ಕೋಟಿ ನೆರವು ನೀಡಲಾಗುವುದು ಎಂದು ಮಾತು ಕೊಟ್ಟರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಶೋಕ ಅವರು, ಹಕ್ಕುಪತ್ರ ವಿತರಣೆಯ ಬಗ್ಗೆ ಈಗ ತಕರಾರು ತೆಗೆಯುವ ಕಾಂಗ್ರೆಸ್ಸಿಗರು ಇಷ್ಟು ವರ್ಷ ಈ ಕೆಲಸ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಇದ್ದರು.
ಮಾಹಿತಿ ಸಾರ ವಾಟ್ಸಪ್ ಗ್ರೂಪ್ ಇದೇ ರೀತಿ ದಿನನಿತ್ಯ ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಕೂಡಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ https://chat.whatsapp.com/FA0PdNzN7gPBDMgjXsvVW9