Spread the love

ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2021-22ನೇ ಸಾಲಿನಲ್ಲಿ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-3ಬಿಗೆ ಸೇರಿದ ವೀರಶೈವ ಲಿಂಗಾಯತ ಸಮುದಾಯದವರಿಂದ ಅರ್ಜಿ ಆಹ್ವಾನಿಸಿದೆ.

ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರದ ಸಣ್ಣ ಮತ್ತು ಅತಿ ಸಣ್ಣ ರೈತರು, ವಾರ್ಷಿಕ ವರಮಾನ ₹40 ಸಾವಿರದೊಳಗೆ ಇರುವವರು ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದರೆ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಜೀವಜಲ ಯೋಜನೆ ಸೌಲಭ್ಯ ಪಡೆಯಲು ಇಚ್ಚಿಸುವವರು ಕೋಲಾರ ಜಿಲ್ಲಾಡಳಿತದ ಭವನದಲ್ಲಿನ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಮೇ 10ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ ಅಥವಾ 080 22865522 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಜೀವಜಲ” ಯೋಜನೆ:
“ಜೀವಜಲ” ಯೋಜನೆಯಡಿ ಸೌಲಭ್ಯ ಪಡೆಯಲು ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ಕನಿಷ್ಟ 2 ಎಕರೆ ಹಾಗೂ ಗರಿಷ್ಟ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ದಕ್ಷಿಣ ಕನ್ನಡ, ಉಡುಪಿ, ಕೊಡಗು. ಉತ್ತರ ಕನ್ನಡ, ಶಿವಮೊಗ್ಗ. ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಟ 1 ಎಕರೆ ಜಮೀನು ಹೊಂದಿರಬೇಕು.

ನಿಗಧಿಪಡಿಸಿರುವ ಘಟಕ ವೆಚ್ಚ : 6 ಜಿಲ್ಲೆಗಳಿಗೆ 3.50 ಲಕ್ಷ ಸಹಾಯಧನ ಹಾಗೂ ರೂ. 50,000/- ಸಾಲ ಮತ್ತು ಉಳಿದ 25 ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ 2.00 ಲಕ್ಷ ಸಹಾಯಧನ ಹಾಗೂ 50,000/- ಸಾಲ ನೀಡಲಾಗುವುದು.

ಅರ್ಹತೆ:
*ಅರ್ಜಿದಾರರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿರಬೇಕು ಹಾಗೂ ಸಂಬಂಧಪಟ್ಟ ಪ್ರಾಧಿಕಾರದಿಂದ ಜಾತಿ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು.
*ಹಾಲಿ ಜಮೀನುಗಳಿಗೆ ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಮಳೆ ಆಧಾರಿತವಾಗಿ ಖುಷಿಯಾಗಿರಬೇಕು.
*ವೀರಶೈವ ಲಿಂಗಾಯತ ಸಮುದಾಯದ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಒಳಪಡುವ ನಿಗಮಗಳಲ್ಲಿ ಬೇರೆ ಯಾವುದಾದರು ಯೋಜನೆಗಳಲ್ಲಿ ಸಾಲ ಅಥವಾ ಇತರೆ ಆರ್ಥಿಕ ಸೌಲಭ್ಯ ಪಡೆದಿರಬಾರದು.
*ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000 ಗಳ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000 ಗಳ ಮಿತಿಯಲ್ಲಿರಬೇಕು.
ಸಣ್ಣ ಹಾಗೂ ಅತಿಸಣ್ಣ ಹಿಡುವಳಿ ಪ್ರಮಾಣ ಪತ್ರ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ

https://kvldel.karnataka.gov.in/2/jeevajala

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ:
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ “ಜೀವಜಲ” ಯೋಜನೆಗೆ ಸಹಾಯಧನ ಸೌಲಭ್ಯ ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ದಿನಾಂಕ: 15-10-2022ರಲ್ಲಿ ಆಹ್ವಾನಿಸಲಾಗಿದ್ದು, 15-12-2022ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿರುತ್ತದೆ.

Leave a Reply

Your email address will not be published. Required fields are marked *