
ಪ್ರಿಯ ರೈತರಿಗೆ ಅಧಿಕೃತ ವೆಬ್ಸೈಟ್ ಮಾಹಿತಿ ಸಾರದಿಂದ ಎಲ್ಲರಿಗೂ ನಮಸ್ಕಾರಗಳು, 2023 ಹಣಕಾಸಿನ ವರ್ಷದಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರೈತರಿಗೆ ಪ್ರಾಮುಖ್ಯತೆ ನೀಡಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು, ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ರಾಜ್ಯದ ಬಜೆಟ್ ಮಂಡನೆ ಮಾಡಿ ರೈತರಿಗೆ ಬಂಪರ್ ಸುದ್ದಿಯನ್ನು ನೀಡಿದ್ದಾರೆ. ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.
ಗಂಗಾ ಕಲ್ಯಾಣ ಯೋಜನೆ ಅಡಿ ನಿಮ್ಮ ಹೊಲದಲ್ಲಿ ಉಚಿತವಾಗಿ ಬೋರ್ವೆಲ್ ಹಾಕಿಸಿಕೊಳ್ಳಿ https://mahitisara.com/upto-2-5-lakhs-subsidy-for-borewell-through-ganga-kalyana-yojane/government-schemes/
2023ರ ಹಣಕಾಸಿನ ವರ್ಷದಲ್ಲಿ, ರೈತರಿಗೆ ಅಲ್ಪ ಕಾಲದಲ್ಲಿ ನೀಡುವ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರೈತರಿಗೆ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಹಾಯ ನೀಡಲಾಗಿದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ. ಗಳಷ್ಟು ಸಾಲ ವಿತರಿಸಲಾಗುವುದು.
ಹಾಗೆ ಇದರ ಜೊತೆಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ‘ಸಿರಿ’ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯಧನ ನೀಡಲು ಸರ್ಕಾರ ನಿರ್ಧಾರ ಮಾಡಿದೆ . ಮತ್ತು ರೈತರಿಗೆ ತುರ್ತು ಸಂದರ್ಭದಲ್ಲಿ ಬೀಜ ರಸಗೊಬ್ಬರ ಹಾಗೆ ಮುಂತಾದ ಹೊಲಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಈ ಯೋಜನೆ ಸಹಾಯವಾಗಲಿದೆ ಎಂದು ತಿಳಿಸಿದರು.ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.
ಹಾಗೆಯೇ ರಾಜ್ಯದ ಸುಮಾರು 50 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ ಅಂದಾಜು 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆಯ ನೆರವಿನೊಂದಿಗೆ ಅವರ ಬದುಕಿಗೆ ಭದ್ರತೆ ಒದಗಿಸಲು ಕ್ರಮ ವಹಿಸಲಾಗುವುದು.
ಇದರ ಜೊತೆಗೆ ರೈತನಿಗೆ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಕೂಡ ಸಹಾಯಧನ ಸರಕಾರ ನೀಡಲಿದೆ ಎಂದು ತಿಳಿಸಿದರು.
ಕೃಷಿ ಇಲಾಖೆಯು ಈಗಾಗಲೇ ನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 300 ಹೈಟೆಕ್ ಹಾರ್ವೆಸ್ಟರ್ ಗಳನ್ನು ಹಂತ ಉದ್ದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ 100 ಹೈಟೆಕ್ ಹಾರ್ವೆಸ್ಟರ್ ಗಳಿಗೆ ತಲಾ 50 ಲಕ್ಷ ರೂ. ನಂತೆ, ಈ ವರ್ಷ 50 ಕೋಟಿ ರೂ. ಒದಗಿಸಲಾಗುವದು.
ಮಾಹಿತಿಸಾರಾ ವಾಟ್ಸಪ್ ಗ್ರೂಪ್ ದಿನನಿತ್ಯ ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಕೂಡಲೇ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿಕೊಳ್ಳಿ https://chat.whatsapp.com/L2lKn9uBniwE5ydfGU4SC6