Spread the love

ಪ್ರಿಯಾ ಓದುಗರೆ ನಮ್ಮ ಧಾರವಾಡದಲ್ಲಿ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಯುವಜನೋತ್ಸವ (National youth festival ) ಜರುಗುತ್ತಿದ್ದು ಜ. 12ರಂದು ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ . ಸುಮಾರು ಐದು ದಿನಗಳ ಕಾಲದ ವರೆಗೂ ಜರಗುವ ಈ ಯುವಜನೋತ್ಸವ ಶಿಸ್ತುಬದ್ಧ ಆಯೋಜನೆಗೆ ಎಲ್ಲಾ ಸಿದ್ಧತೆ ನಡೆದಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 12ರಂದು ಹುಬ್ಬಳ್ಳಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆದರೆ, ಜ. 13ರಿಂದ 16ರ ವರೆಗೆ ವಿವಿಧ ರೀತಿಯ ಸ್ಪರ್ಧೆಗಳು ಧಾರವಾಡದ ಕರ್ನಾಟಕ ಕಾಲೇಜು, ಕವಿವಿ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿವೆ. ಬೇರೆ ಬೇರೆ ರಾಜ್ಯಗಳಿಂದ ಸುಮಾರು 7500 ಯುವ ಕಲಾವಿದರು ಭಾಗವಹಿಸಿ ಪ್ರದರ್ಶನ ನೀಡಲಿದ್ದಾರೆ.

ಬೆಳೆ ವಿಮೆ ನಿಮ್ಮ ಖಾತೆಗೆ ಜಮಾ ಆಗಿದೆ ಎಂಬುದನ್ನು ತಿಳಿಯಿರಿ 👇👇https://mahitisara.com/index.php/2023/01/04/29-8-crore-parihara-payment-has-realesed/

ಜ. 12ರಿಂದ 17 ರ ವರೆಗೆ, ಈ ಕಾರ್ಯಕ್ರಮವು ನಡೆಯಲಿದ್ದು , ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಇಡೀ ಧಾರವಾಡ ಹುಬ್ಬಳ್ಳಿ ಅವಳಿ ನಗರವನ್ನು ಸುಂದರಗೊಳಿಸುವತ್ತ ಜಿಲ್ಲಾಡಳಿತದ ಚಿತ್ತ ಹರಿಸಿದೆ.

ಈ ಹಿಂದೆ ಧಾರವಾಡದಲ್ಲಿ ನಡೆದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲೂ ಇದೇ ರೀತಿಯಾಗಿ ನಗರವನ್ನು ಸೂಚಿಗೊಳಿಸಿ ಶೃಂಗರಿಸಲಾಗಿತ್ತು. ಇದೀಗ ನಾಲ್ಕು ವರ್ಷಗಳ ನಂತರ ರಾಷ್ಟ್ರೀಯ ಯುವ ಸಮ್ಮೇಳನಕ್ಕೆ ಬೇರೆ ಬೇರೆ ರಾಜ್ಯಗಳಿಂದ ಅಂದಾಜು 7500 ಯುವ ಪ್ರತಿಭೆಗಳು ಆಗಮಿಸುತ್ತಿದ್ದಾರೆ. ಅತಿಥಿಗಳು, ಗಣ್ಯಮಾನ್ಯರು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಹುಬ್ಬಳ್ಳಿ ಧಾರವಾಡ ಅವಳಿ ನಗರವನ್ನು ಸ್ವಚ್ಛಗೊಳಿಸಿ ಸುಂದರಗೊಳಿಸುವ ಅನಿವಾರ‍್ಯತೆಯೂ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುವ ಸಮ್ಮೇಳನವನ್ನು ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ಮೈದಾನದಲ್ಲಿ ಉದ್ಘಾಟನೆ ಮಾಡಿದರೂ ಧಾರವಾಡದ ಪ್ರಮುಖ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿವೆ. ಹೀಗಾಗಿ ಮೊದಲಿಗೆ ಧಾರವಾಡದ ಕರ್ನಾಟಕ ಕಾಲೇಜು(Karnataka collage), ಕರ್ನಾಟಕ ವಿವಿ, ಕೃಷಿ ವಿವಿಗೆ ಸಂಪರ್ಕ ಕಲ್ಪಿಸುವ ಒಟ್ಟು 12 ರಸ್ತೆಗಳ ಸುಧಾರಣೆ ಕಾರ್ಯ ಬರದಿಂದ ನಡೆದಿದೆ. ಜತೆಗೆ ಗಟಾರುಗಳ ಸ್ವಚ್ಛತೆ, ಕಸ ನಿರ್ವಹಣೆ ಕಾರ್ಯ ಶುರು ಮಾಡಲಾಗಿದೆ. ಮಹಾನಗರ ಪಾಲಿಕೆಯ 100 ಸಿಬ್ಬಂದಿ ಬಳಸಿಕೊಂಡು ಕಸ ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ರಾಷ್ಟ್ರೀಯ ಯುವಜನೋತ್ಸವದ ಯಶಸ್ವಿಗಾಗಿ ನಡೆಸಲು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಸತಿ, ಊಟ, ಸಾರಿಗೆ, ವೇದಿಕೆ ಸೇರಿದಂತೆ ವಿವಿಧ ಕಾರ್ಯಗಳ ಕುರಿತು 17ಕ್ಕೂ ಹೆಚ್ಚು ಸಮಿತಿ ರಚಿಸಿ, ಕಾರ್ಯಗಳ ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಯುವಜನೋತ್ಸವದಲ್ಲಿ ಸ್ಥಳೀಯ ಕಲಾವಿದರಿಗೂ ಅವಕಾಶ ನೀಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ಪ್ರತಿನಿಧಿಗಳಿಗೆ ಯೋಗಾ ಮ್ಯಾಟ್‌, ಧಾರವಾಡ ಪೇಢಾ, ಗರಗ ಖಾದಿ ಕೇಂದ್ರದಿಂದ ರಾಷ್ಟ್ರಧ್ವಜವಿರುವ ಒಂದು ಪ್ರೇಮ್‌ ಕೊಡಲು ತೀರ್ಮಾನಿಸಿದ್ದು ಈ ಎಲ್ಲ ವಸ್ತುಗಳನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಕಂಪನಿಗಳು ಪ್ರಾಯೋಜಕತ್ವ ವಹಿಸಿಕೊಳ್ಳುತ್ತಿವೆ. ಈ ಮೂಲಕ ಧಾರವಾಡ ಬ್ರ್ಯಾಂಡ್‌ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶ ಮಾಡುತ್ತಿರುವುದಾಗಿ ಜಿಲ್ಲಾಧಿಕಾರಿ ಹೇಳಿದರು.

ಪ್ರಧಾನಿ ಮೋದಿ ಬರುವ ಹಿನ್ನಲೆಯಲ್ಲಿ ಹಾಸ್ಟೆಲ್ ಖಾಲಿ ಮಾಡಿ ಎಂದು ವಿದ್ಯಾರ್ಥಿಗಳಿಗೆ ಸೂಚನೆ

ಪ್ರಧಾನಿ ನರೇಂದ್ರ ಮೋದಿಯವರು ಧಾರವಾಡದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವ (National youth festival )ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಒಂಬತ್ತು ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (ಕೆಯುಡಿ) ವಿದ್ಯಾರ್ಥಿಗಳಿಗೆ , ಮತ್ತು ಕೃಷಿ ವಿಶ್ವವಿದ್ಯಾಲಯ ಧಾರವಾಡದ ವಿದ್ಯಾರ್ಥಿಗಳಿಗೆ ಸೂಚಿಸಿದೆ. 2023ರ ಜನವರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳ ವಾಸ್ತವ್ಯಕ್ಕಾಗಿ ಒಂಬತ್ತು ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ “ಕೆಯುಡಿ” ಮತ್ತು “ಯುಎಎಸ್‌ಡಿ “ಹೇಳಿದೆ. ಈ ನಿಲುವಿನ ವಿರುದ್ಧ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್
ಅತಿ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷದವರೆಗೂ ಸಾಲ ಪಡೆಯಿರಿ💸💸
ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಸಂಪೂರ್ಣ ಮಾಹಿತಿಗಾಗಿ ಕೆಳಗಿನ ಲಿಂಕ್ ಅನ್ನು ಒತ್ತಿ https://mahitisara.com/index.php/2023/01/04/how-to-apply-application-for-kisan-credit-card/



Leave a Reply

Your email address will not be published. Required fields are marked *