Spread the love

ಎಲ್ಲ ರೈತ ಬಾಂಧವರಿಗೆ ನಮಸ್ಕಾರಗಳು, ಭಾರತ ಸರಕಾರವು ರೈತರಿಗೆ ನೆರವಾಗಲೆಂದು, ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಠ ಐದು ಎಕರೆಗೆ ಡಿ. ಬಿ. ಟಿ ಮೂಲಕ ಡೀಸೆಲ್‌ಗೆ ಸಹಾಯ ಧನವನ್ನು ನೀಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು, ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ‌. ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ.
ರೈತರ ಬ್ಯಾಂಕ್ ಖಾತೆಗೆ 1250 ರೂಪಾಯಿ ಸಹಾಯಧನವಾಗಿ ರಾಜ್ಯ ಸರ್ಕಾರದಿಂದ ಅತಿ ಶೀಘ್ರವಾಗಿ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹೌದು ರೈತ ಬಾಂಧವರೇ 2022-23 ಬಜೆಟ್ ನಲ್ಲಿ ಕೃಷಿ ಸಮುದಾಯಕ್ಕೆ ಹಾಗೂ ಕೃಷಿಯಲ್ಲಿ ಯಂತ್ರೋಪಕರಣಗಳ ಉತ್ತೇಜನ ನೀಡುವುದಕ್ಕಾಗಿ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಸರ್ಕಾರವು ಯೋಜನೆಯನ್ನು ಬಿಡುಗಡೆ ಮಾಡಿತ್ತು ಆ ಯೋಜನೆ ಹೆಸರೆನೆಂದರೆ “ರೈತಶಕ್ತಿ” ಯೋಜನೆ

ಕೃಷಿ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ‘ರೈತಶಕ್ತಿ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿತ್ತು.

ಈ ಯೋಜನೆಯಡಿ ಇಂದ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಸಹಾಯಧನ ನೀಡಲಾಗುತ್ತಿದೆ.

ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಟ 5 ಎಕರೆಯವರೆಗೆ 1250 ರೂ.ಗಳನ್ನು ಡಿಬಿಟಿ ಮೂಲಕ ಡೀಸೆಲ್ ಸಬ್ಸಿಡಿ ನೀಡುವುದು ‘ರೈತಶಕ್ತಿ’ ಯೋಜನೆಯಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಈ ಯೋಜನೆಯಡಿ ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಗರಿಷ್ಟ 5 ಎಕರೆಯವರೆಗೆ ಫ್ರೂಟ್ಸ್ ಪೋರ್ಟಲ್ (FRUITS) ನಲ್ಲಿ ನೋಂದಣಿ ಗುರುತಿನ (FID) ಸಂಖ್ಯೆಯಲ್ಲಿ ನಮೂದಿಸಿರುವ ಹಿಡುವಳಿಯ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನ ವರ್ಗಾವಣೆ ಆಗಲಿದೆ.

ನೋಂದಣಿ ಹೇಗೆ ?
ರೈತರು ಈ ಯೋಜನೆಯ ಪ್ರಯೋಜನೆ ಪಡೆಯಲು ಹತ್ತಿರದ ರೈತಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಗಳ ವಿಸ್ತೀರ್ಣವನ್ನು ಫ್ರೂಟ್ಸ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿರಬೇಕು.

ಡೀಸೆಲ್ ಸಬ್ಸಿಡಿಯು ಡಿಬಿಟಿ ಮುಖಾಂತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ದೊರೆಯಲಿದೆ. ಇದುವರೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳದ ರೈತರು ಕೂಡಲೇ ನೋಂದಣಿಯನ್ನು ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಸಹಾಯಧನವೆಷ್ಟು ?
ಒಂದು ಎಕರೆವರೆಗೆ ರೂ. 250, ಎರಡು ಎಕರೆವರೆಗೆ ರೂ. 500, ಮೂರು ಎಕರೆವರೆಗೆ ರೂ. 750, ನಾಲ್ಕು ಎಕರೆವರೆಗೆ ರೂ. 1000, ನಾಲ್ಕು ಎಕರೆ ಮೇಲ್ಪಟ್ಟು ರೂ. 1250 ಸಹಾಯಧನ ಸಿಗಲಿದೆ.

ಈ ಯೋಜನೆಯ ಲಾಭ ಪಡೆಯಲು ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಮಾಲೀಕತ್ವದ ಎಲ್ಲಾ ಜಮೀನಿನ ಸರ್ವೆ ನಂಬರ್‌ವಾರು ವಿಸ್ತೀರ್ಣ ನೋಂದಣಿಯಾಗಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.

ಬರಗಾಲ ಮತ್ತು ಪ್ರವಾಹದ ಬೆಳೆ ನಷ್ಟ ಪರಿಹಾರ ವಿತರಿಸಲು, ಬೆಂಬಲ ಬೆಲೆ ಯೋಜನೆಯಲ್ಲಿ ಕೃಷಿ ಉತ್ಪನ್ನ ಖರೀದಿಸಲು, ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯಲು, ಕೃಷಿ/ ತೋಟಗಾರಿಕೆ/ ರೇಷ್ಮೆ ಮತ್ತು ಇತರೆ ಇಲಾಖೆಗಳಲ್ಲಿ ಸವಲತ್ತುಗಳನ್ನು ಪಡೆಯಲು ಫ್ರೂಟ್ಸ್ (FRUITS Portal) ನಲ್ಲಿ ನೋಂದಣಿ ಅಗತ್ಯವಾಗಿದೆ.

Leave a Reply

Your email address will not be published. Required fields are marked *