
ಯಶಸ್ವಿನಿ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದದಲ್ಲಿನ ಸಹಕಾರಿ ಸಂಘಗಳ ಸದಸ್ಯರ ೪ ಜನರ ಕುಟುಂಬಕ್ಕೆ ತಲಾ 500 ರೂ. ಮತ್ತು ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದ್ದು. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಹೊಂದಿದ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು.ನೋಂದಣಿ ನವೆಂಬರ್ 1 ರಿಂದ ಲೆ ಪ್ರಾರಂಭವಾಗಿದೆ. ಸ್ಥಗಿತಗೊಳಿಸಲಾಗಿದ್ದ ಈ ಯಶಸ್ವಿನಿ ಯೋಜನೆಯನ್ನು ಕರ್ನಾಟಕ ಸರ್ಕಾರ ಮತ್ತೆ ಜಾರಿಗೆ ತರುವುದಾಗಿ ಈಗಾಗಲೇ ಘೋಷಣೆ ಮಾಡಿತ್ತು. ಮಹತ್ವಾಕಾಂಕ್ಷೆಯ ಯಶಸ್ವಿನಿ ಆರೋಗ್ಯ (Yashaswini Yojana) ಯೋಜನೆಯನ್ನು ಪುನಃ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೊದಲ ಬಜೆಟ್ನಲ್ಲಿ ಘೋಷಿನೆ ಮಾಡಿದ್ದಾರೆ. ಆದರೆ ಯೋಜನೆ ಮರು ಜಾರಿ ಆಗಲಿದೆ ಎನ್ನುವುದು ಮಾತ್ರ ನಿಗೂಢವಾಗಿತ್ತು. ಇದೀಗ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ದಿನಾಂಕವನ್ನು ಘೋಷಿಸಿದ್ದು. ಬೆಂಗಳೂರಿನಲ್ಲಿ ನಡೆದ ರಾಜ್ಯ ಸಹಕಾರ ಮಹಾಮಂಡಳ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಸಹಕಾರ ದಿನ ಕಾರ್ಯಕ್ರಮದಲ್ಲಿ ಸಹಕಾರ ಸಚಿವರಾದಂತ ಎಸ್.ಟಿ. ಸೋಮಶೇಖರ್, ಯಶಸ್ವಿನಿ ಯೋಜನೆ ಮರುಜಾರಿ ಕುರಿತು ಮಾತನಾಡಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಹಾಸಿಗೆ ಸಾಮಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ಉಪ ಕೇಂದ್ರ ಹಾಗೂ ಇಂದಿರಾಗಾಂ ಮಕ್ಕಳ ಆರೋಗ್ಯ ಸಂಸ್ಥೆಯ ಮಕ್ಕಳ ತೀವ್ರ ನಿಗಾಘಟಕದ ಉಪ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಸದಸ್ಯರ ನೇರವಿಗೆ ಸರ್ಕಾರವು ಬದ್ಧವಾಗಿದೆ. ಸರ್ಕಾರವು ಎಲ್ಲ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ.
ಮಹತ್ವಾಕಾಂಕ್ಷೆಯ “ಯಶಸ್ವಿನಿ” ಆರೋಗ್ಯ (Yashaswini Yojana) ಯೋಜನೆಯನ್ನು ಸನ್ಮಾನ್ಯ ಸಿಎಂ ಬಸವರಾಜ ಬೊಮ್ಮಾಯಿ ಅವರು ಮರು ಜಾರಿಗೊಳಿಸಿದ್ದಾರೆ. ರೈತ ಹಾಗೂ ಬಡ ಕುಟುಂಬಗಳಿಗೆ ಪ್ರಯೋಜನವಾಗುವಂತ ಯಶಸ್ವಿನಿ ಯೋಜನೆಯನ್ನು ರಾಜ್ಯ ಮತ್ತೆ ಮರು ಜಾರಿಗೊಳಿಸಲಾಗಿದೆ. ಸನ್ಮಾನ್ಯ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ನಲ್ಲಿ ಯಶಸ್ವಿ ಯೋಜನೆಗಾಗಿಯೇ 300 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ. ಏನಿದು ಯೋಜನೆ, ಇದರಿಂದ ಯಾರೆಲ್ಲ ಪ್ರಯೋಜನ ಪಡೆಯುತ್ತಾರೆ,ಈ ಯೋಜನೆಯಡಿ ಯಾವೆಲ್ಲ ಸೌಲಭ್ಯಗಳಿವೆ,ಆ ಸೌಲಭ್ಯಗಳನ್ನು ಪಡೆಯುವ ವಿಧಾನ ಹೇಗೆ? .ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ರೈತರು ಮತ್ತು ಸಹಕಾರಿಗಳಿಗೆ ಅತ್ಯಂತ ಅನುಕೂಲಕರ ವಾಗಿರುವ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೊಳಿಸಲಾಗಿದ್ದು, ಇದರ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗುತ್ತಿದೆ.
“ಯಶಸ್ವಿನಿ” ಯೋಜನೆಯಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂಪಾಯಿಗಳವರೆಗಿನ ವೈದ್ಯಕೀಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ನೂರಾರು ನೆಟ್ವರ್ಕ್ ಆಸ್ಪತ್ರೆಗಳನ್ನು ಗುರುತಿಸಲಾಗಿದೆ. 2003 – 2004 ರಲ್ಲಿ ಯಶಸ್ವಿನಿ ಯೋಜನೆ ಆರಂಭವಾಗಿದ್ದು, ಲಕ್ಷಾಂತರ ಜನರು ಇದರ ಪ್ರಯೋಜನೆ ಪಡೆದುಕೊಂಡಿದ್ದರು. ಬಳಿಕ 2017-2018ರಲ್ಲಿ ಈ ಯೋಜನೆಯನ್ನು ಆರೋಗ್ಯ ಕರ್ನಾಟಕ ಜೊತೆ ವಿಲೀನಗೊಳಿಸಲಾಗಿತ್ತು.ಆದರೆ ಇದರಿಂದ ಹೆಚ್ಚಿನ ಪ್ರಯೋಜನವಾಗದ ಕಾರಣ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತಂತೆ ಘೋಷಣೆ ಹೊರಡಿಸಿದ್ದು, ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭವಾಗುತ್ತಿದೆ.
“ಯಶಸ್ವಿನಿ ” ಯೋಜನೆ ಎಂದರೇನು?
ಯಶಸ್ವಿನಿ ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ. ಕರ್ನಾಟಕದ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಒಂದು ‘ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆ’. ಈ ಯೋಜನೆಯಡಿ ಗ್ರಾಮೀಣ ಸಹಕಾರಿಯೊಬ್ಬರು ಮಾಸಿಕ (ತಿಂಗಳಿಗೆ )ಇಂತಿಷ್ಟರಂತೆ ನಿಗದಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ, ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ಟ್ರಸ್ಟ್ನಿಂದ ಅಂಗೀಕೃತ ಯಾವುದೇ ಆಸ್ಪತ್ರೆಗಳಲ್ಲಿ ಹಣ ರಹಿತವಾಗಿ ಶಸ್ತ್ರ ಚಿಕಿತ್ಸೆ ಪಡೆಯಬಹುದು. ಯಶಸ್ವಿನಿ ಯೋಜನೆಯ ನೋಂದವಣೆ ಯಾವಾಗ?
ಯಶಸ್ವಿನಿ ನೋಂದಾವಣೆಯು ಪ್ರತಿ ವರ್ಷದಲ್ಲಿ ಜನವರಿ ಅಥವಾ ಫೆಬ್ರವರಿಯಲ್ಲಿ ಪ್ರಾರಂಭವಾಗಿ ಆಗಸ್ಟ್ ಮಾಸಿಕ ( ತಿಂಗಳ) ದಲ್ಲಿ ಕೊನೆಯಾಗುತ್ತದೆ.
ಯೋಜನೆಯ ಪಡೆಯಲು ಇರಬೇಕಾದ ಅರ್ಹತೆಗಳು ಯಾವುವು?
ಈ ಯೋಜನೆಯ ಪಡೆಯಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ ಅಥವಾ ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀ ಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು.
ಎಷ್ಟು ಬಗೆಯ ಶಸ್ತ್ರಚಿಕಿತ್ಸೆಗಳು ಲಭ್ಯವಿರುತ್ತವೆ?
823 ಬಗೆಯ ವಿವಿಧ ಶಸ್ತ್ರ ಚಿಕಿತ್ಸೆಗಳು
ಪ್ರತಿಯೊಬ್ಬ ಸದಸ್ಯನಿಗೆ ಯುನಿಕ್ ಐಡಿ ನಂಬರ್ಗಳಿರುವ ಬಾರ್ ಕೋಡ್ ರೀಡಿಂಗ್ ವ್ಯವಸ್ಥೆ ಇರುವ ಗುರುತಿಸುವ ಕಾರ್ಡ್ಗಳನ್ನು ನೀಡಲಾಗುತ್ತದೆ. ಅದರ ಮುಂದಿನ ಪ್ರಬದಲ್ಲಿ ನೋಂದಾಯಿಸಿದ ವಿವರಗಳು ಮತ್ತು ಹಿಂಬದಿಯಲ್ಲೇ ಅವರ ಭಾವಚಿತ್ರಗಳು ಇರುತ್ತದೆ.“ಯಶಸ್ವಿನಿ” ಯೋಜನೆಯಡಿಯಲ್ಲಿ ಒಳಗೊಂಡಿರುವ ಶಸ್ತ್ರಚಿಕಿತ್ಸೆಗಳ ವಿವಿರ :
ಶಸ್ತ್ರಚಿಕಿತ್ಸೆ ಅವಶ್ಯವಿಲ್ಲದ ಯಾವುದೇ ವೈದ್ಯಕೀಯ ಚಿಕಿತ್ಸೆ ಯೋಜನೆಯಲ್ಲಿ ಲಭ್ಯವಿರುವುದಿಲ್ಲ. ಇದಲ್ಲದೇ ಚಿಕಿತ್ಸೆಗಳಾದ ಕೀಮೊಥೆರಪಿ, ರೇಡಿಯೋ ಥೆರಪಿ, ಜಾಯಿಂಟ್ ಬದಲಾವಣೆ, ಸುಟ್ಟು ಗಾಯಗಳು, ರಸ್ತೆ ಅಪಘಾತಗಳು, ಹಲ್ಲಿನ ಶಸ್ತ್ರಚಿಕಿತ್ಸೆ, ಚರ್ಮದ ಗ್ರಾಫ್ಟಿಂಗ್,ಸ್ಟಂಟ್, ಇಂಪ್ಲಾಂಟ್ಸ್ ಮತ್ತು ಇನ್ನಿತರ ಸೌಲಭ್ಯಗಳು ಯೋಜನೆಯಲ್ಲಿ ಸೇರಿರುವುದಿಲ್ಲ. ಇಂತಹ ಅನಾರೋಗ್ಯಗಳಿಗೆ ಫಲಾನುಭವಿ ಪಡೆಯುವ ವೈದ್ಯಕೀಯ ಚಿಕಿತ್ಸೆ, ಔಷಧೋಪಚಾರಗಳ ಹಾಗೂ ಶಸ್ತ್ರಚಿಕಿತ್ಸಾ ವೆಚ್ಚವನ್ನು ಫಲಾನುಭವಿಗಳೇ ಭರಿಸಬೇಕು. ಯಶಸ್ವಿನಿ ಯೋಜನೆಯ ಫಲಾನುಭವಿತ್ವ ಬಯಸುವವರು ಪಾವತಿಸಬೇಕಾದ ವಂತಿಗೆ ಹಣ ಎಷ್ಟು?? ಯಶಸ್ವಿನಿ ಯೋಜನೆಯ ಫಲಾನುಭವಿಯಾಗಲು ಬಯಸುವ ಪ್ರತಿಯೊಬ್ಬರೂ ವರ್ಷಕ್ಕೆ ನಿಗದಿತ ಪ್ರಮಾಣದ ವಂತಿಗೆ ಹಣ ನೀಡಬೇಕು. 2014-2015ನೇ ಸಾಲಿಗೆ ವಾರ್ಷಿಕ ವಂತಿಗೆ ರೂ.250/- ಆಗಿರುತ್ತದೆ.ಒಂದೇ ಕುಟುಂಬದ 5 ಅಥವಾ 5 ಕ್ಕಿಂತ ಹೆಚ್ಚು ಸದಸ್ಯರು ನೊಂದಣಿಯಾದಲ್ಲಿ ವಂತಿಗೆಯಲ್ಲಿ ಶೇಕಡ .15 ರಿಯಾಯಿತಿ ಇರುತ್ತದೆ .
ಮುಖ್ಯವಾಗಿ ಹೇಳಬೇಕೆಂದರೆ ಈಗಾಗಲೇ ಹೇಳಿರುವ ಹಾಗೆ ನ .1 ರಿಂದ ಯಶಸ್ವಿನಿ ಯೋಜನೆಯನ್ನು ಮರು ಸ್ಥಾಪನೆ ಮಾಡಲಾಗುದ್ದು. ಇದರಿಂದ ಲಕ್ಷಾಂತರ ಜನರು ಲಾಭ ಪಡೆಯ ಬಹುದು ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಯನ್ನು ಕೈಗೊಂಡಿದ್ದು. ಅನೇಕ ಜನರಿಗೆ ಆರ್ಥಿಕ ಉತ್ತೇಜನ ಹಾಗೂ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಹಕಾರ ಸಹಾಯ ಮಾಡುತ್ತಿದೆ. ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣಾ ಕೇಂದ್ರ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಎಲ್ಲ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಉಚಿತವಾಗಿ ನಡೆಸಲಾಗುತ್ತದೆ. 500 ಕೋಟಿ ರೂ. ವೆಚ್ಚದಲ್ಲಿ ಕಿವಿಗಳಿಗೆ ನೀಡುವ ಯಂತ್ರಗಳನ್ನು ಸಹ ನೀಡುತ್ತೇವೆ ಇದು ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ನೀಡುತ್ತಿರುವ ಪ್ರಮುಖ ಆದ್ಯತೆ ಎಂದರು ಆರೋಗ್ಯದ ಜತೆ ಶಿಕ್ಷಣಕ್ಕೂ ಒತ್ತು ನೀಡಲಾಗಿದೆ.
ಅದೇ ರೀತಿ ಇದರಿಂದ ರಾಜ್ಯದಲ್ಲಿ ಇರುವ 4 ಸಾವಿರ ಅಂಗನವಾಡಿ ಕೇಂದ್ರಗಳನ್ನು ಈ ವರ್ಷವೇ ಪ್ರಾರಂಭಿಸುತ್ತೇವೆ. ಎಷ್ಟೋ ಬಡ ಹೆಣ್ಣುಮಕ್ಕಳು ಶಾಲೆಗಳಲ್ಲಿ ಶೌಚಾಲಯ ಇರುವುದಿಲ್ಲ ಎಂಬ ಕಾರಣಕ್ಕೆ ಶಾಲೆಗೆ ಬರಲು ಹಿಂದು – ಮುಂದು ನೋಡುತ್ತಾರೆ. ಆ .15 ರೊಳಗೆ ಎಲ್ಲಾ ಶಾಲೆಗಳಿಗೂ ಶೌಚಾಲಯಗಳನ್ನು ತೆರೆಯಲಾಗುವುದು ಎಂದು ವಿವರಿಸಿದರು. ಹಾಗೂ ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ಮಾಶಾಸನವಾಗಿ ಸಾವಿರ ಪರಿಹಾರ ನೀಡಲಾಗುತ್ತಿತ್ತು. ಇದನ್ನು 10 ಸಾವಿರಕ್ಕೆ ನಮ್ಮ ಸರ್ಕಾರ ಹೆಚ್ಚಿಸಿದೆ ಹೀಗೆ ಪ್ರತಿಯೊಬ್ಬರಿಗೂ ಸರ್ಕಾರದ ಸವಲತ್ತು ತಲುಪಿಸಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಪರಿಶೀಲನೆ ಮಾಡಿ ಈ ಯೋಜನೆಯ ಪುನಃ ಪ್ರಾರಂಭಿಸಲು ಚಿಂತನೆ ನಡೆಸಿದೆ.
ಕಳೆದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಈ ಯೋಜನೆಯನ್ನು ರೂಪಿಸಿದ್ದರು, ಆದರೆ ಕೆಲವು ವರ್ಷ ಈ ಯೋಜನೆ ಸ್ಥಗಿತಗೊಂಡಿತ್ತು, ಆದರೆ ರಾಜ್ಯ ಸರ್ಕಾರ ಈಗ ಈ ಮಹತ್ವದ ಯಶಸ್ವಿನಿ ಯೋಜನೆ ಮತ್ತೆ ಗಮನಹರಿಸಿ ಯೋಜನೆ ಆರಂಭಿಸಲಿದ್ದಾರೆ. ಈಗಾಗಲೇ ಇಲಾಖೆ ಕಡೆಯಿಂದ ಎಲ್ಲ ತಯಾರಿಯಾಗಿದ್ದು, ಈ ಬಗ್ಗೆ ಸಿಎಂ ಅವರ ಜೊತೆ ಮಾತಾಡಲಾಗಿದೆ. ಮುಂದಿನ ಅಕ್ಟೋಬರ್ ಎರಡರಂದು ಯೋಜನೆ ಉದ್ಘಾಟನೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯದ ಸಹಕಾರ ಸಚಿವ ಸೋಮಶೇಖರ್ ಅವರು ಸ್ಪಷ್ಟಪಡಿಸಿದರು.
ಸಾರ್ವಜನಿಕರು ಈ ಯಶಸ್ವಿನಿ ಯೋಜನೆಯನ್ನು ಪಡೆಯಲು ಇರಬೇಕಾದ ಅರ್ಹತೆಗಳೇನು ?
• ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತವಾಗಿ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಲೆಬೇಕು.
• ಗ್ರಾಮೀಣ ಸಹಕಾರ ಸಂಘ ಅಥವಾ ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀ ಶಕ್ತಿ ಗುಂಪಿನ, ಸ್ವ – ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಸಹಕಾರ ಯಾವುದೇ ಸಂಘಗಳ ಕ್ಷೇತ್ರದಲ್ಲಿ ಸದಸ್ಯರಿರುವವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.
ಕಳೆದ ವರ್ಷ ಜಾರಿಯಲ್ಲಿದ್ದಾಗ ವಂತಿಗೆ ಹಣವನ್ನು ಫಲಾನುಭವಿಯಾಗ ಬಯಸುವ ಪ್ರತಿಯೊಬ್ಬರೂ ವರ್ಷಕ್ಕೆ ನಿಗದಿತ ಪ್ರಮಾಣದ ವಂತಿಗೆ ಹಣ ಕಟ್ಟಬೇಕು. ಆವಾಗ ಅಂದರೆ 2014-15 ನೇ ಸಾಲಿಗೆ ವಾರ್ಷಿಕ ವಂತಿಗೆ ರೂ.250 ರೂ. ಇತ್ತು. ಆದರೆ ಈಗ ಮತ್ತೆ ಯೋಜನೆ ಪ್ರಾರಂಭಿಸಿದರೆ ವಂತಿಗೆ ಹಣವೂ ಎಷ್ಟಾಗುತ್ತದೆ ಎಂದು ಅಂದಾಜು ಮಾಡಿ ನಿಗದಿಪಡಿಸಲಾಗುತ್ತದೆ. ಮುಖ್ಯವಾಗಿ ಹೇಳಬೇಕೆಂದರೆ ಒಂದೇ ಕುಟುಂಬದ 5 ಅಥವಾ 5 ಕ್ಕಿಂತ ಹೆಚ್ಚು ಸದಸ್ಯರು ನೋಂದಣಿಯಾದಲ್ಲಿ ವಂತಿಗೆಯಲ್ಲಿ ಶೇ.15 ರಿಯಾಯಿತಿ ಇರುತ್ತದೆ. ರೈತರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈಗ ಈ ಯೋಜನೆಯ ಅಡಿಯಲ್ಲಿ ಸದ್ಯ ರಾಜ್ಯದಲ್ಲಿ ಜಾರಿಯಲ್ಲಿರುವ ಆರೋಗ್ಯ ಕರ್ನಾಟಕ ಯೋಜನೆ ಅನುಷ್ಠಾನ ವಿಳಂಬದಿಂದಾಗಿ ರಾಜ್ಯದಲ್ಲಿದ್ದ ಸುಮಾರು 43.42 ಲಕ್ಷ ಯಶಸ್ವಿನಿ ಫಲಾನುಭವಿಗಳು ಇದ್ದರು ಅದರ ಪೈಕಿ ಈಗ 30 ಲಕ್ಷಕ್ಕು ಅಧಿಕ ಜನರಿಗೆ ಆರೋಗ್ಯ ಸೇವೆ ಲಭ್ಯವಾಗುವಂತಾಗಿದೆ. ಈ ಯೋಜನೆ ಸ್ಥಗಿತಗೊಂಡ ನಂತರ ಈ ಸೇವೆಯಲ್ಲಿ ಉಚಿತ ಚಿಕಿತ್ಸೆ ಸಿಗದೆ ಇವರೆಲ್ಲ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕ ದುರ್ಬಲರು ಮತ್ತು ಮಧ್ಯಮ ವರ್ಗದ ಜನರಿಗೆ ಇದು ತುಂಬಾ ದುಬಾರಿಯಾಗುತ್ತಿದೆ. ಆದರೆ ಈ ಯೋಜನೆಯ ಪುನರಾರಂಭದಿಂದ ಉಚಿತ ಚಿಕಿತ್ಸೆ ಪಡೆಯಲು ಅವಕಾಶ ಸಿಕ್ಕಂತಾಗಿದೆ. ಎಷ್ಟೋ ಬಡ ಕುಟುಂಬಗಳಿಗೆ ಹಣಕಾಸಿನ ನೆರವು ಕೂಡ ನೀಡಿದಂತಾಗುತ್ತದೆ.
ಮುಖ್ಯವಾಗಿ ಹೇಳಬೇಕೆಂದರೆ ಈ ಯಶಸ್ವಿನಿ ಯೋಜನೆ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ 823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು. ದುಬಾರಿ ಇರುವ ಶಸ್ತ್ರ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದಂತಾಗುತ್ತದೆ. ಮೊದಲು ರಾಜ್ಯದಾದ್ಯಂತ 905 ಯಶಸ್ವಿನಿ ವರ್ಕ್ ಆಸ್ಪತ್ರೆಗಳಿದ್ದವು ಆದರೆ ಈಗ ಈ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಯೋಜನೆ ಅಡಿಯಲ್ಲಿ ಗ್ರಾಮೀಣ ಜನರು 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ.ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯವನ್ನು ಪಡೆಯಬಹುದು ಹಾಗೂ ಗ್ರಾಮೀಣ ಮಟ್ಟದ ಜನರಿಗೆ, ಬಡ ಕುಟುಂಬಗಳಿಗೆ ಇದೊಂದು ಮಹತ್ವವಾದ ಯೋಜನೆ ಆಗಿದೆ
ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರು, ಸರ್ಕಾರ ಜಾರಿತರುವ ಇಂತಹ ಯೋಜನೆಗಳ ಲಾಭವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣಬೇಕು. ಇದರ ಸದುಪಯೋಗ ಪಡಿಸಿಕೊಂಡು ರೈತರು ಅಭಿವೃದ್ಧಿ ಹೊಂದಬೇಕು ಎನ್ನುವ ದೃಷ್ಟಿಯಿಂದ ಸರ್ಕಾರವು ಮಹತ್ವದ ಕಾರ್ಯ ಮಾಡುತ್ತಿದೆ. ಹಾಗೂ ರೈತರು ಸ್ವಾವಲಂಬಿ ಜೀವನ ನಡೆಸಲು ಇದು ಪ್ರಮುಖ ಪಾತ್ರ ವಹಿಸುತ್ತದೆ.